ಕಲಬುರಗಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರ ಬಗ್ಗೆ ಇಬ್ಬರು ಮುಂದಿನ ದಿನಗಳಲ್ಲಿ ತುಂಬಾ ಪಶ್ಚಾತಾಪ ಪಡುತ್ತಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಕಲಬುರಗಿಯಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸೌದಿ ಅವರು ಸೋತ ನಂತರವೂ ಉಪಮುಖ್ಯಮಂತ್ರಿ ಮಾಡಲಾಗಿತ್ತು. ಜಗದೀಶ್ ಶೆಟ್ಟರ್ ಅವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಷ್ಟು ಮಾಡಿದ ಮೇಲೂ ಪಕ್ಷವನ್ನು ಬಿಟ್ಟು ಹೋಗುವುದು ಅವರು ಚಿಂತನೆ ಮಾಡಬೇಕು ಎಂದರು.
ಪಕ್ಷದ ಕಾರ್ಯಕರ್ತರಿಗೂ ಸ್ಥಾನಮಾನ ಸಿಗಬೇಕು. ಬಿಜೆಪಿ ಕಾರ್ಯಕರ್ತರಿಗೆ ಅವಕಾಶವನ್ನು ಒದಗಿಸಿಕೊಡುತ್ತದೆ. ಬಿಜೆಪಿ ಪಕ್ಷದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೆಲಸ ಮಾಡುವುದು ತುಂಬಾ ಗೌರವದ ಮಾತಾಗಿದೆ ಎಂದರು.
ಭಾರತೀಯ ಜನತಾ ಪಾರ್ಟಿ, ದೇಶದ ಅತಿ ದೊಡ್ಡ ಪಕ್ಷವಾಗಿದೆ. ಇವರು ಈಗ ಇಂತಹ ಒಂದು ಪಕ್ಷದ ಜೊತೆ ಹೋಗಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ ಎಂದು ದೂರಿದರು. ಪ್ರತಿದಿನ ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತಿದೆ, ಕಾಂಗ್ರೆಸ್ ಮುಳುಗುತ್ತಿದೆ ಇಂತಹ ಪಕ್ಷದಲ್ಲಿ ಹೋಗೋದು ಅವರ ಸ್ವಾರ್ಥಕ್ಕಾಗಿ ಹೋಗಿದ್ದಾರೆ.
ನಮಗೆ ಯಾವುದೇ ರೀತಿಯ ಚಿಂತನೆ ಮಾಡುವಂಥ ವಿಚಾರವಲ್ಲವೆ ಎಂದು ಪ್ರಶ್ನಿಸಿದರು. ಭಾರತೀಯ ಜನತಾ ಪಕ್ಷ ಕಾರ್ಯಕರ್ತರ ಶಕ್ತಿಯ ಆಧಾರದ ಮೇಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಾವು ಪ್ರಚಂಡ ಬಹುಮತದೊಂದಿಗೆ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದರು.