ಸಂಕಷ್ಟದ ಪರಿಸ್ಥಿತಿ ನಿವಾರಣೆಗೆ ಸಿಎಂ ಸುದೀರ್ಘ ಚರ್ಚೆ

Advertisement

ಬೆಂಗಳೂರು: ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಆದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್‌ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು.
ಸಭೆಯಲ್ಲಿ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ, ಶಿವರಾಜ ಪಾಟೀಲ್, ವಿ. ಗೋಪಾಲಗೌಡ, ಆರ್.ವಿ ರವೀಂದ್ರನ್, ಪಿ. ವಿಶ್ವನಾಥಶೆಟ್ಟಿ, ಎ.ಎನ್. ವೇಣುಗೋಪಾಲಗೌಡ, ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರು ಆದ ಡಿ.ಕೆ. ಶಿವಕುಮಾರ್, ಕಾನೂನು ಸಚಿವರಾದ ಸಚಿವ ಎಚ್.ಕೆ. ಪಾಟೀಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ರಾಜಕೀಯ ಸಲಹೆಗಾರರಾದ ನಸೀರ್ ಅಹ್ಮದ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮಾಜಿ ಅಡ್ವೋಕೇಟ್ ಜನರಲ್ ಗಳಾದ ಬಿ.ವಿ. ಆಚಾರ್ಯ, ಮಧುಸೂದನ್ ನಾಯಕ್, ವಿಜಯಶಂಕರ್, ಉದಯ್ ಹೊಳ್ಳ, ಪ್ರೊ. ರವಿವರ್ಮಕುಮಾರ್, ಪ್ರಭುಲಿಂಗ ನಾವದಗಿ ಹಾಗೂ ಕಾನೂನು, ಜಲ ಸಂಪನ್ಮೂಲ ಇಲಾಖೆ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.