ಸಂಜೆ ಕಾಂಗ್ರೆಸ್‌ ಶಾಸಕಾಂಗ ಸಭೆ

Advertisement

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ 5.30ಕ್ಕೆ ನಡೆಯಲಿದೆ, ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದ್ದು, ಹೊಸದಾಗಿ ಆಯ್ಕೆಯಾದ 135 ಕಾಂಗ್ರೆಸ್ ಶಾಸಕರು ಭಾಗವಹಿಸಿ ತಮ್ಮ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಬಳಿಕ ಹೈಕಮಾಂಡ್ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ. ಸಂಜೆ 6 ಗಂಟೆಗೆ ಸಭೆ ಆರಂಭವಾಗಲಿದೆ. ಮೊದಲ ಎರಡು ವರ್ಷ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡಲಿದ್ದು, ಮುಂದಿನ ಮೂರು ವರ್ಷ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ಮಾತುಗಳು ಈಗಾಗಲೇ ಕೇಳಿಬರುತ್ತಿದ್ದು. ಈ ಪ್ರಕ್ರಿಯೆ ಇಷ್ಟು ಸರಳವಾಗಿ ನಡೆಯುವ ಸಾಧ್ಯತೆಯಿಲ್ಲ. ಏನು ಬೇಕಾದರೂ ಆಗಬಹುದು ಎಂದು ಮೂಲಗಳು ಹೇಳಿವೆ.