ಸತೀಶ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ಕೊಳಕು ಮನಸ್ಸಿನ ಮನಸ್ಥಿತಿ: ಬಸವರಾಜ ಬೊಮ್ಮಾಯಿ

ಬಸವರಾಜ
Advertisement

ಹಾವೇರಿ: ಮೊಟೆಬೆನ್ನೂರು ಹೆಲಿಪ್ಯಾಡ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ವಿಚಾರ ಇದು ಕೊಳಕು ಮನಸ್ಸಿನ ಮನಸ್ಥಿತಿ ಒಂದು ಸಮಗ್ರವಾಗಿ ಇರುವ ಪರಂಪರೆ ಬಗ್ಗೆ ಪದೇ ಒದೇ ಕೆಣಕುವುದು, ಅವಮಾನ ಅಪಮಾನ ಮಾಡೋದು ಎಷ್ಟು ಸರಿ? ಅಲ್ಲಿ ಅವರ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಮಾಡ್ತಿದ್ದಾರೆ ಆದರೆ ಇಲ್ಲಿ ಇಂಥ ಹೇಳಿಕೆ ಕೊಟ್ಟು ಇವರು ಭಾರತ್ ತೋಡೊ ಮಾಡ್ತಿದ್ದಾರೆ
ಇವರ ಹೇಳಿಕೆಯಿಂದ ಎಷ್ಟೊಂದು ಜನಕ್ಕೆ ನೋವಾಗಿದೆ, ಇದು ಭಾರತ ಒಡೆಯುವ ಸಂಚಿನ ಮನಸ್ಥಿತಿ ಅವರ ಆಡಳಿತ, ಅವರ ನೀತಿಯಿಂದಲೇ ದೇಶಕ್ಕೆ ಆಂತರಿಕ ದಕ್ಕೆ ಬಂದಿದೆ. ಅರಾಜಕತೆ ಹುಟ್ಟಿಸಿ ಅಧಿಕಾರಕ್ಕೆ ಬರುವ ಮನಸ್ಥಿತಿ ಇವರದ್ದು ಯಾಕೆ ಸಿದ್ದರಾಮಯ್ಯ ಇನ್ನೂ ಮಾತಾಡಿಲ್ಲ? ಇದಕ್ಕೆ ರಾಹುಲ್ ಗಾಂಧಿ ಅಭಿಪ್ರಾಯ ಏನು? ಕಾರ್ಯಾದ್ಯಕ್ಷರ ಹೇಳಿಕೆಗೆ ಕ್ರಮ ಜರುಗಿಸುತ್ತಾರಾ?
ರಾಜ್ಯಾದ್ಯಂತ ಸಮಾವೇಶ ಮಾಡುತ್ತಿದ್ದೇವೆ ನಮಗೆ ಜನರಿಂದ ಅಭೂತ ಪೂರ್ವ ಬೆಂಬಲ ಸಿಗುತ್ತಿದೆ ಜನರ ಉತ್ಸಾಹ ಇಮ್ಮಡಿಯಾಗಿದೆ ಬಿಜೆಪಿ ಮತ್ತೆ ಅಧಿಕಾರಕ್ಕೆ ತರೋ ಸಂಕಲ್ಪ ಜನ ಮಾಡಿದ್ದಾರೆ ಪ್ರತಿಯೊಬ್ಬ ಫಲಾನುಭವಿಗೆ ನಮ್ಮ ಸರ್ಕಾರಗಳ ಕಾರ್ಯಕ್ರಮ ಮುಟ್ಟಿಸುತ್ತಿದ್ದೇವೆ ಬಿಜೆಪಿಯನ್ನು ಮನೆಗೆ ಕಳಿಸುವ ಸಂಕಲ್ಪ ಜನ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಟೀಕೆ ವಿಚಾರ ಸಿದ್ದರಾಮಯ್ಯ ಹೇಳಿದ್ದು ಯಾವುದಾಗಿದೆ? ಅವರಪ್ಪನಾಣೆ ಯಡಿಯೂರಪ್ಪ ಸಿಎಂ ಆಗಲ್ಲ ಅಂದಿದ್ರು ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದಿದ್ರು ಯಾವುದಾದರೂ ಆಗಿದೆಯಾ? ಮತ್ತೆ ನಾನೇ ಸಿಎಂ ಅಂದರು ಆದರೆ ಸಿಎಂ ಆದರಾ? ಅವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಲ್ಲ ನೀವೂ ತಲೆ ಕೆಡಿಸಿಕೊಳ್ಳಬೇಡಿ, ಸಿದ್ದರಾಮಯ್ಯ ಅವರು ಹಿಂದೆ ಜನಾಶೀರ್ವಾದ ಯಾತ್ರೆ ಮಾಡಿದರು ಆದರೆ ಜನ ಅವರಿಗೆ ಆಶೀರ್ವಾದ ಮಾಡಲಿಲ್ಲ ಅವರ ದುರಾಡಳಿತದಿಂದ ಜನ ಅವರನ್ನು ತಿರಸ್ಕಾರ ಮಾಡಿದರು.