ಸರ್ಕಾರಗಳ ವೈಫಲ್ಯ ಖಂಡಿಸಿ ಪ್ರತಿಭಟನೆ

Advertisement

ಹುಬ್ಬಳ್ಳಿ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಖಂಡಿಸಿ ಮಾಜಿ ಸಚಿವ ಕೆ.ಎನ್. ಗಡ್ಡಿ ಹಾಗೂ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರು ಮಂಗಳವಾರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ರೈತರು ಬೆಳೆದ ಕಡಲೆ ಬೆಳೆಗೆ ಸಿಡಿ ಹಾಯ್ದು ಹಾಳಾಗಿವೆ. ಬೆಳೆ ಹಾಳಾದ ಹಿನ್ನಲೆಯಲ್ಲಿ ಸರ್ಕಾರ ಪ್ರತಿ ಎಕರೆಗೆ 10000 ರೂ. ಪರಿಹಾರ ನೀಡಬೇಕು. ಶೀಘ್ರದಲ್ಲಿ ಎಲ್ಲ ಬೆಳೆಗಳ ಖರೀದಿ ಕೇಂದ್ರ ಸ್ಥಾಪನೆ ಮಾಡಿ ನಿರಂತರ ಖರೀದಿ ಪ್ರಾರಂಭಿಸಬೇಕು. ರೈತರು ಪಾವತಿಸಿದ ಎಲ್ಲ ಬೆಳೆಗಳ ಬೆಳೆ ವಿಮೆಯನ್ನು ಗರಿಷ್ಠ ಮಟ್ಟದಲ್ಲಿ ಬಿಡುಗಡೆ ಮಾಡಬೇಕು. ಜಿಲ್ಲೆಯಲ್ಲಿ ರೈತರು ಹತ್ತಿ ಬೆಳೆದಿದ್ದು ಸರಿಯಾದ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ಆದ್ದರಿಂದ ಶೀಘ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ 12,500 ರೂ. ನಿಗದಿ ಮಾಡಿ ಹತ್ತಿ ಖರೀದಿ ಕೇಂದ್ರ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಎಲ್ಲ ಗ್ರಾಮಗಳ ಸಂಪರ್ಕ ರಸ್ತೆ ಮತ್ತು ಹೊಲದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರೈತರು, ಜನ ಸಾಮಾನ್ಯರಿಗೆ ಹಾಗೂ ವಾಹನ ಸವಾರರಿಗೆ ಸಂಚರಿಸಲು ಆಗದ ದುಸ್ಥಿತಿ ನಿರ್ಮಾಣವಾಗಿದೆ. ತಕ್ಷಣವೇ ರಸ್ತೆಗಳ ಅಭಿವೃದ್ಧಿ ಮಾಡಬೇಕು ಎಂದು ಒತ್ತಾಯಿಸಿದರು.