ಸರ್ಕಾರಿ ನೌಕರರಿಗೆ ೨ ದಿನ ರಜೆ

ಶಿಕ್ಷಕರ ನೇಮಕಾತಿ
Advertisement

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಫೆ.೨೭ರಂದು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸರ್ಕಾರಿ ನೌಕರರಿಗೆ ೨ ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ. ನಿಗಮ, ಮಂಡಳಿ, ನಗರ ಪಾಲಿಕೆಗಳು, ಪ್ರಾಧಿಕಾರಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸುತ್ತೋಲೆಯಲ್ಲಿ ತಿಳಿಸಿರುವಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಆಯಾಯ ಸಂಸ್ಥೆಯು ತಮ್ಮ ಹಂತದಲ್ಲಿ ಪರಿಶೀಲಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳತಕ್ಕದ್ದು ಎಂದು ತಿಳಿಸಿದೆ.