ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ಭರ್ತಿ

Advertisement

ದಾವಣಗೆರೆ‍: ಸಾರಿಗೆ ಇಲಾಖೆಯಲ್ಲಿ ಕಳೆದ ಏಳು ವರ್ಷಗಳಲ್ಲಿ ಒಂದೇ ಒಂದು ಹುದ್ದೆ ಭರ್ತಿ ಮಾಡಿಲ್ಲ. ಈಗ ೧೩ ಸಾವಿರ ಹುದ್ದೆ ಭರ್ತಿ ಮಾಡಿಕೊಳ್ಳಲು ಮಂಡಳಿಯಲ್ಲಿ ತೀರ್ಮಾನ ಮಾಡಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ದಾವಣಗೆರೆಯಲ್ಲಿ ನಿಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಮಗಾರಿಯನ್ನು, ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರೊಂದಿಗೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
೨೦೧೬ರಲ್ಲಿ ನಾನು ಸಚಿವನಾಗಿದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಅಲ್ಲಿಂದ ಈವರೆಗೆ ೧೬ ಸಾವಿರ ನೌಕರರು ವಯೋ ನಿವೃತ್ತಿ ಹೊಂದಿದ್ದಾರೆ. ಆದರೆ, ಕಳೆದ ಏಳು ವರ್ಷದಲ್ಲಿ ಒಂದು ಹುದ್ದೆಯು ಭರ್ತಿ ಮಾಡಿಲ್ಲ. ಈಗ ನಮ್ಮ ಸರಕಾರ ಅಧಿಕಾರಕ್ಕೆ ಬಂದಾದ ಬಳಿಕ ೧೩ ಸಾವಿರ ಹುದ್ದೆ ಭರ್ತಿ ಮಾಡುವ ಬಗ್ಗೆ ಮಂಡಳಿಯಲ್ಲಿ ತೀರ್ಮಾನ ತೆಗೆದುಕೊಂಡು, ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ” ಎಂದರು.
ಕಳೆದ ಐದು ವರ್ಷದ ಬಿಜೆಪಿ ಅಧಿಕಾರಾವಧಿಯಲ್ಲಿ ಕೆಎಸ್‌ಆರ್‌ಟಿಸಿಗೆ ಒಂದು ಬಸ್ ಸಹ ಖರೀದಿಸಿಲ್ಲ. ಕೊನೆ ವರ್ಷದಲ್ಲಿ ನಾಲ್ಕು ಸಾವಿರ ಬಸ್ ಖರೀದಿಗೆ ಮುಂದಾಗಿದ್ದರು. ಅದು ಟೆಂಡರ್ ಹಂತದಲ್ಲಿತ್ತು. ಹೀಗಾಗಿ, ಬಸ್‌ಗಳು ರಸ್ತೆಗೆ ಇಳಿದಿರಲಿಲ್ಲ. ಆದರೆ, ಸದ್ಯದಲ್ಲಿಯೇ ಐದು ಸಾವಿರ ಹೊಸ ಬಸ್‌ಗಳು ಕೆಎಸ್‌ರ‍್ಟಿಸಿಗೆ ಬರಲಿವೆ ಎಂದು ಹೇಳಿದರು.ಶಕ್ತಿ ಯೋಜನೆಯಡಿ ಈವರೆಗೂ ೪೩ ಕೋಟಿ ಮಹಿಳೆಯರು ನಮ್ಮ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಒಂದು ಸಾವಿರ ಕೋಟಿ ಮೊತ್ತದ ಶೂನ್ಯ ಟಿಕೆಟ್ ವಿತರಿಸಲಾಗಿದೆ. ಪ್ರಾರಂಭದಲ್ಲಿ ನಮ್ಮ ವಿರೋಗಳು ಏನೇ ಟೀಕೆ ಮಾಡಿದರೂ, ಅದಕ್ಕೆ ಕಿವಿಗೊಡದೆ ಯೋಜನೆಯನ್ನು ಅನುಷ್ಠಾನಗೊಳಿಸಿದ ಮಹಿಳೆಯರಿಗೆ ಹಾಗೂ ಯೋಜನೆ ಅನುಷ್ಠಾನಕ್ಕೆ ಶ್ರಮಿಸಿದ ನಾಲ್ಕೂ ನಿಗಮಗಳ ನೌಕರರಿಗೆ ಧನ್ಯವಾದ ಅರ್ಪಿಸುತ್ತೇನೆ. ಜೂನ್ ತಿಂಗಳ ಶೇ.೮೦ ರಷ್ಟು ಪ್ರಯಾಣದ ಹಣವನ್ನು ಸರಕಾರ ಭರಿಸಿದೆ. ಜುಲೈ ತಿಂಗಳ ೨೯೩ ಕೋಟಿ ರೂ. ಬಿಡುಗಡೆಯಾಗಿದೆ. ಅಕಾರಿಗಳು ಡೇಟಾ ಕೊಟ್ಟ ಬಳಿಕ ಉಳಿದ ಹಣವನ್ನು ಸರಕಾರ ಬಿಡುಗಡೆ ಮಾಡಲಿದೆ” ಎಂದು ಮಾಹಿತಿ ನೀಡಿದರು.ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಹಾಗೂ ನಗರ ಸಾರಿಗೆಗಳಿಗೂ ಎಲೆಕ್ಟ್ರಿಕಲ್ ಬಸ್ ಖರೀದಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಆಯಾ ನಗರಗಳ ಜನಸಂಖ್ಯೆ ಆಧಾರದಲ್ಲಿ ಎಲೆಕ್ಟ್ರಿಕಲ್ ಬಸ್‌ಗಳನ್ನು ನಾಲ್ಕು ವಿಭಾಗಗಳಿಗೆ ಹಂಚಿಕೆ ಮಾಡಲಾಗಿಲ್ಲ ಎಂದರು.

ಬಾಹ್ಯಾಕಾಶಕ್ಕೆ ನೆಹರು ಅವರು ಭದ್ರ ಬುನಾದಿ ಹಾಕಿದ್ದರು. ಈಗ ಇಸ್ರೋ ಉಡಾವಣೆ ಮಾಡಿರುವ ಉಪಗ್ರಹ ಚಂದ್ರನಲ್ಲಿ ಹೋಗಿ ಇಳಿಯುತ್ತಿದೆ. ಈ ಕಾರ್ಯಕ್ರಮಕ್ಕೆ ಶ್ರಮಿಸಿದ ಎಲ್ಲ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ :ರಾಮಲಿಂಗ ರೆಡ್ಡಿ, ಸಾರಿಗೆ ಸಚಿವ