ಸಾಲ ಬಾಧೆ: ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ

ಚಿಕ್ಕಮಗಳೂರು: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಮಹಿಳೆ ಹನುಮಮ್ಮ(75) ಎಂದು ಗುರುತಿಸಿದ್ದಾರೆ. ಇವರು ಕೆನರಾ ಬ್ಯಾಂಕ್ ನಲ್ಲಿ 6 ಲಕ್ಷ ಸಾಲ ಮಾಡಿದ್ದ ಹನುಮಮ್ಮ, ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಷ್ಟ, ಸಾಲದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.