ಸಿಎಂ ಸ್ಥಾನದಿಂದ ವಜಾ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Advertisement

ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಿರುವುದರಿಂದ ಅವರನ್ನು ಪದಚ್ಯುತಗೊಳಿಸುವಂತೆ ಗುಪ್ತಾ ಮನವಿ ಮಾಡಿದ್ದರು. ಆದರೆ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಹುದ್ದೆಯಲ್ಲಿ ಮುಂದುವರೆಯಬೇಕೆ ಅಥವಾ ಬೇಡವೇ ಎಂಬುದು ಕೇಜ್ರಿವಾಲ್‌ ಅವರ ವೈಯಕ್ತಿಕ ನಿರ್ಧಾರ, ಈ ಪ್ರಕರಣವನ್ನು ನಿರ್ಧರಿಸುವುದು ನ್ಯಾಯಾಲಯದಿಂದ ಸಾಧ್ಯವಿಲ್ಲ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅಥವಾ ಭಾರತದ ರಾಷ್ಟ್ರಪತಿ ಈ ಕುರಿತು ನಿರ್ಧರಿಸಬೇಕು ಎಂದು ಅದು ಸ್ಪಷ್ಟಪಡಿಸಿದೆ.