ಸಿದ್ದರಾಮಯ್ಯ ಅವರಿಗೆ ಕಲಘಟಗಿ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ: ಸಂತೋಷ ಲಾಡ್

ಸಂತೋಷ ಲಾಡ್
Advertisement

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ, ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಪೇಕ್ಷೆ ಪಟ್ಟರೆ ಕಲಘಟಗಿ ವಿಧಾನಸಭಾ ಕ್ಷೇತ್ರ ಅವರಿಗೆ ಬಿಟ್ಟು ಕೊಡಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಸಿಗುತ್ತಿಲ್ಲ ಎಂಬ ಟೀಕೆ ಅರ್ಥಹೀನವಾದುದು. ಅವರು ಹೋದ ಕಡೆಗಳಲ್ಲೆಲ್ಲ ಅವರ ಕ್ಷೇತ್ರದಲ್ಲಿ ಸ್ಪರ್ಧಿಸಲು ಮನವಿ ಮಾಡುತ್ತಿದ್ದಾರೆ. ಅವರೊಬ್ಬ ಉನ್ನತ ನಾಯಕರು. ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಜನರು ಅವರನ್ನು ಬೆಂಬಲಿಸುತ್ತಾರೆ ಎಂದರು. ಕಲಘಟಗಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಒಂದು ವೇಳೆ ಸಿದ್ದರಾಮಯ್ಯ ಬಯಸಿದರೆ ನೀವು ಆಕಾಂಕ್ಷಿಯಾಗಿರುವ ಕಲಘಟಗಿ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದು ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಾಡ್, ಸಿದ್ದರಾಮಯ್ಯ ಅವರು ಅಪೇಕ್ಷೆ ಪಟ್ಟರೆ ಕಲಘಟಗಿ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ ಎಂದರು