ಸುಪ್ರೀಂ ಮೆಟ್ಟಿಲೇರಿದ ಸಿಸೋಡಿಯಾ

Advertisement

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ದೆಹಲಿ ನ್ಯಾಯಾಲಯ ಸಿಸೋಡಿಯಾ ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ವಹಿಸಿರುವ ನಂತರ ಸಿಸೋಡಿಯಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿರುವುದರ ಬಗ್ಗೆ ವಿಚಾರಣೆ ನಡೆಸಲು ಹೆಚ್ಚಿನ ಕಾಲವಕಾಶ ಬೇಕಾಗುತ್ತದೆ ಎಂದು ಸಿಬಿಐ ದೆಹಲಿ ನ್ಯಾಯಾಲಯಕ್ಕೆ ಮಾಡಿಕೊಂಡ ಮನವಿಯನ್ನು ಪರಿಗಣಿಸಿ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ನಿರಾಕರಿಸಲಾಗಿತ್ತು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ತಮ್ಮ ವಿಚಾರವನ್ನು ತುರ್ತು ವಿಚಾರಣೆ ನಡೆಸುವಂತೆ ಸಿಸೋಡಿಯಾ ಅವರು ಮನವಿ ಮಾಡಿಕೊಂಡಿದ್ದಾರೆ.