ಸುಳ್ಳಿನ ಸುಳಿಯಲ್ಲಿ ಕಾಂಗ್ರೆಸ್ ಪಕ್ಷ: ಬೊಮ್ಮಾಯಿ

ಬೊಮ್ಮಾಯಿ
Advertisement

ಹಾಸನ: ಕಾಂಗ್ರೆಸ್‌ನವರ ಬೂಟಾಟಿಕೆ ಮಾತು, ಸುಳ್ಳು ಹೇಳುವ ಚಾಳಿಯಿಂದ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ. ಭ್ರಷ್ಟ ಕಾಂಗ್ರೆಸ್‌ನ್ನು ಶಾಶ್ವತವಾಗಿ ಜನರು ಮನೆಗೆ ಕಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಭಾಗವಹಿಸಿ ಮಾತನಾಡಿ, ಹಾಸನ ಬಹಳ ವರ್ಷಗಳಿಂದ ಒಂದೇ ಪಕ್ಷದ ಹಿಡಿತದಲ್ಲಿದ್ದು, ಯಾವುದೇ ಅಭಿವೃದ್ಧಿಯಾಗುತ್ತಿಲ್ಲ. 3 ವರ್ಷಗಳಿಂದ ಬಿಜೆಪಿ ಸರ್ಕಾರದ ಆಡಳಿತವನ್ನು ಜನರು ನೋಡಿದ್ದಾರೆ. ಹಲವು ವರ್ಷಗಳ ಸಮಸ್ಯೆಗಳನ್ನು ಕಗ್ಗಂಟಾಗಿಸಿ, ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸಲಾಗಿತ್ತು. ಈ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಮಲ ಅರಳಿಸಬೇಕಿದೆ. ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಯುವ ವಿಶ್ವಾಸವಿದೆ ಎಂದರು.