ಸ್ಪರ್ಧಾತ್ಮಕ ಪರೀಕ್ಷೆಯ ಮೊಬೈಲ್ ಆ್ಯಪ್‌ಗೆ ಚಾಲನೆ

Advertisement

ಉಡುಪಿ: ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊಬೈಲ್ ಆ್ಯಪ್‌ಗೆ ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್ ಚಾಲನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರವನ್ನು ಹಂಚಿಕೊಂಡಿದ್ದು, ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮೂಲಕ ಆನ್ ಲೈನ್ ತರಬೇತಿ ನೀಡುವ ಸಲುವಾಗಿ ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿದಿನ ಸಂಜೆ 5.30 ರಿಂದ 7:00 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ. ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಏಕಕಾಲದಲ್ಲಿ ಈ ತರಬೇತಿ ನಡೆಯಲಿದೆ. ಈ ವೇಳೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ, ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು ಎಂದಿದ್ದಾರೆ.‌


ಆಸಕ್ತ ವಿದ್ಯಾರ್ಥಿಗಳು ಮೊಬೈಲ್ ಆ್ಯಪ್ ಮೂಲಕ ನೊಂದಾವಣೆ ಮಾಡಿ ಕೊಳ್ಳಬೇಕು. ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ದೂರದ ದೆಹಲಿ, ಹೈದರಾಬಾದ್‌ಗೆ ತೆರಳಿ ಇಂತಹ ತರಬೇತಿ ಪಡೆಯಲು ಸಾಧ್ಯವಾಗುವುದಿಲ್ಲ. ಅವರಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಸರಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದಕ್ಕೆ ಪ್ರತಿ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ ಸಹಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.