ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು…. ಗೀತೆಗೆ ಹೆಜ್ಜೆ ಹಾಕಿದ ಆಯುಕ್ತ

HUBLI
Advertisement

ಹುಬ್ಬಳ್ಳಿ: ಇಂದಿರಾ ಗಾಜಿನ ಮನೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಧೀಮಂತ ಸನ್ಮಾನ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ. ಬಿ.ಗೋಪಾಲಕೃಷ್ಣ ಹಾಡಿಗೆ ಹೆಜ್ಜೆ ಹಾಕಿ ಗಮನ ಸೆಳೆದರು.
ಈ ಹಿಂದೆ ಒಂದೆರಡು ಕಾರ್ಯಕ್ರಮದಲ್ಲಿ ಟಗರು' ಚಲನಚಿತ್ರದಟಗರು ಬಂತು ಟಗರು’ ಹಾಡಿಗೆ ಹೆಜ್ಜೆ ಹಾಕಿದ್ದ ಗೋಪಾಲಕೃಷ್ಣ ಅವರು ನೃತ್ಯ ಪ್ರತಿಭೆಯಿಂದ ಅವಳಿನಗರ ಜನರ ಗಮನ ಸೆಳೆದಿದ್ದರು.
ಮಂಗಳವಾರ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮತ್ತೆ ಟಗರು ಗೀತೆಗೆ ಹೆಜ್ಜೆ ಹಾಕಿ ಹುರುದುಂಬಿಸಿದರು. ಬಳಿಕ ವರನಟ ಡಾ. ರಾಜಕುಮಾರ್ ಅವರು ಹಾಡಿದ ಹಂಸಲೇಖ ಅವರು ಬರೆದ `ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗೆ ಆಕರ್ಷಕ ನೃತ್ಯ ಮಾಡಿದ್ದು, ರಾಜ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದಿತು. ಈ ಮೂಲಕ ನೆರೆದಿದ್ದ ಜನರನ್ನು ರಂಜಿಸಿದರು.
ಹಾಡಿಗೆ ಗೋಪಾಲಕೃಷ್ಣ ಹೆಜ್ಜೆ ಹಾಕುತ್ತಿದ್ದಂತೆ ಪಾಲಿಕೆ ಮಹಾಪೌರ ಈರೇಶ ಅಂಚಟಗೇರಿ ಸಾಥ್ ನೀಡಿದರೆ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ದೊರೆರಾಜ ಮಣಿಕುಂಟ್ಲಾ ಗೋಪಾಲಕೃಷ್ಣ ಅವರೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.