ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ಸೇವೆ ವಿಸ್ತರಣೆ

ಹುಬ್ಬಳ್ಳಿ: ಹುಬ್ಬಳ್ಳಿ-ರಾಮೇಶ್ವರಂ-ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ ಸೇವೆಯನ್ನು ಈಗಿರುವ ಸಮಯ, ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ವಿಸ್ತರಿಸಲಾಗುತ್ತಿದೆ.ಹುಬ್ಬಳ್ಳಿಯಿಂದ ಪ್ರತಿ ಶನಿವಾರ ಚಲಿಸುತ್ತಿರುವ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಅಕ್ಟೋಬರ್ 7ರಿಂದ ಡಿಸೆಂಬರ್ 30ರವರೆಗೆ ಮುಂದುವರಿಸಲಾಗಿದೆ. ಈ ಮೊದಲು ಸೆಪ್ಟೆಂಬರ್ 30ರವರೆಗೆ ಓಡಿಸಲು ಸೂಚಿಸಲಾಗಿತ್ತು.ರಾಮೇಶ್ವರಂನಿಂದ ಪ್ರತಿ ಭಾನುವಾರ ಚಲಿಸುತ್ತಿರುವ ರಾಮೇಶ್ವರಂ-ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಅಕ್ಟೋಬರ್ 8ರಿಂದ ಡಿಸೆಂಬರ್ 31ರವರೆಗೆ ಮುಂದುವರಿಸಲಾಗಿದೆ. ಈ ಮೊದಲು 01.10.2023ರವರೆಗೆ ಓಡಿಸಲು ಸೂಚಿಸಲಾಗಿತ್ತು.