ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್ ಪಾಟೀಲ್‌ಗೆ ನೋಟಿಸ್‌

Advertisement

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ಕುರಿತಾಗಿ ಸಂಜಯ್ ಪಾಟೀಲ್‌ಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಕಳೆದ ದಿನ ಹಿಂಡಲಗಾ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿದ್ದ ಸಂಜಯ್​ ಪಾಟೀಲ್ ಮಾತಿನ ಭರದಲ್ಲಿ ಒಂದು ಪೆಗ್ ಬಗ್ಗೆ ಮಾತನಾಡಿದ್ದರು.
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಸೇರಿದ್ದ ಸಂಗತಿ ಯಾರದೇ ಹೆಸರನ್ನು ಉಲ್ಲೇಖಿಸದೇ ಇದನ್ನು ಅಕ್ಕಾಗೆ ಹೋಗಿ ತಲುಪಿಸಬೇಕು ಎಂದರು. ಅಷ್ಟಕ್ಕೆ ತಮ್ಮ ಮಾತು ನಿಲ್ಲಿಸದ ಸಂಜಯ ಪಾಟೀಲರು, ಇದರಿಂದ ಅಕ್ಕಾಗೆ ರಾತ್ರಿ ಸರಿಯಾಗಿ ನಿದ್ದೆ ಬರಲ್ಲ. ಅವರು ನಿದ್ರೆ ಮಾತ್ರೆ ತೆಗೆದುಕೊಳ್ಳಬೇಕು ಅಥವಾ ಒಂದು ಪೆಗ್ ಹೆಚ್ಚಿಗೆ ಹೊಡೆಯಬೇಕು ಎಂದು ವ್ಯಂಗ್ಯವಾಡಿದ್ದರು.