ಮಹಾರಾಷ್ಟ್ರ: ಬಸ್ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 26 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಇಂದು ಮುಂಜಾನೆ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು , 26 ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಇತರ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಮಹರಾಷ್ಟ್ರ ಮುಖ್ಯಮಂತ್ರಿಗಳು, ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ.ಗಳ ಸಹಾಯವನ್ನು ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.