೪೦ ನಾಯಕರ ಕಾಂಗ್ರೆಸ್ ರಾಜ್ಯ ತಾರಾ ಪ್ರಚಾರಕರ ಪಟ್ಟಿ ಪ್ರಕಟ

ಕಾಂಗ್ರೆಸ್‌
Advertisement

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ೪೦ ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಈ ಪಟ್ಟಿಯಲ್ಲಿನ ಪ್ರಮುಖ ನಾಯಕರಾಗಿದ್ದಾರೆ.
ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಕಳುಹಿಸಿದ್ದಾರೆ. ಈ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ವೀರಪ್ಪ ಮೊಯ್ಲಿ, ಜೈರಾಂ ರಮೇಶ್ ಕಾಂಗ್ರೆಸ್‌ನ ಟಾಪ್ ೧೦ ಸ್ಟಾರ್ ಪ್ರಚಾರಕರಾಗಿದ್ದಾರೆ.
ಲಕ್ಷ÷್ಮಣ್ ಸವದಿ, ಬಿ.ವಿ.ಶ್ರೀನಿವಾಸ್, ಸಚಿವ ಕೆ.ಜೆ.ಜಾರ್ಜ್, ವಿನಯ ಕುಮಾರ್ ಸೊರಕೆ, ಬಿ.ಕೆ.ಹರಿಪ್ರಸಾದ್, ಆರ್.ವಿ.ದೇಶಪಾಂಡೆ, ಡಾ.ಜಿ.ಪರ­ಮೇಶ್ವರ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಹೆಚ್.ಎಂ.ರೇವಣ್ಣ, ಪಿ.ಜಿ.ಆರ್.ಸಿಂಧ್ಯಾ, ಬಿ.ಸೋಮ­ಶೇಖರ್, ಕೆಪಿಸಿಸಿ ಉಪಾಧ್ಯಕ್ಷ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸೀರ್ ಹುಸ್ಸೇನ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದು­ಕೊಂಡಿದ್ದಾರೆ. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಮಧು ಬಂಗಾರಪ್ಪ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಪಿ.ಟಿ.ಪರಮೇಶ್ವರ್ ನಾಯ್ಕ್, ವಿ.ಎಸ್.ಉಗ್ರಪ್ಪ, ಎಂಎಲ್‌ಸಿ ಉಮಾಶ್ರೀ, ಪುಷ್ಪಾ ಅಮರನಾಥ್, ಮಾಜಿ ಸಚಿವ ತನ್ವೀರ್ ಸೇಠ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.