2.2 ಕೋಟಿ ಅಕ್ರಮ ಹಣ, 347 ಕೆ.ಜಿ ಗಾಂಜಾ ವಶ

Advertisement

ಹುಬ್ಬಳ್ಳಿ: ಕರ್ನಾಟಕದಲ್ಲಿ ಈಚೆಗೆ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರೈಲ್ವೆ ರಕ್ಷಣಾ ದಳ (ಆರ್‌ಪಿಎಫ್- ರೈಲ್ವೆ ಪ್ರೊಟಕ್ಷನ್ ಫೋರ್ಸ್) ಮಾದಕ ವಸ್ತು ಸಾಗಾಟ ಮತ್ತು ಮಾರಾಟ ನಿಯಂತ್ರಣ ಕಾಯ್ದೆಯಡಿ ೨೪ ಪ್ರಕರಣಗಳನ್ನು ದಾಖಲಿಸಿಕೊಂಡು ೩೪೭.೩ ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದು, ೨೭ ಜನರ ವಿರುದ್ಧ ಪ್ರಕರಣ ದಾಖಲಿಸಿದೆ. ಅಲ್ಲದೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡದ ಸಹಕಾರದಲ್ಲಿ ದಾಖಲೆರಹಿತವಾದ ೨.೨ ಕೋಟಿ ಮೊತ್ತವನ್ನು ವಶಪಡಿಸಿಕೊಂಡಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಆರ್‌ಪಿಎಫ್ ಅಧಿಕಾರಿ ದೇವಾಂಶ ಶುಕ್ಲಾ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆಯನ್ನು ಆರ್‌ಪಿಎಫ್ ತಂಡಗಳು ಕರ್ನಾಟಕದ ವಿವಿಧ ಕಡೆಗಳಲ್ಲಿ ಕೈಗೊಂಡಿದ್ದವು. ಚುನಾವಣೆಯಲ್ಲಿ ನಡೆಯಲಿದ್ದ ಅಕ್ರಮಕ್ಕೆ ಕಡಿವಾಣ ಹಾಕುವ ಮೂಲಕ ಹೊಣೆಗಾರಿಕೆ ಮೆರೆದಿದೆ ಎಂದು ನೈಋತ್ಯ ರೈಲ್ವೆ ವಲಯ ಸಾರ್ವಜನಿಕ ಮುಖ್ಯ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.