ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗವಾಗಬೇಕು: ಸಿಎಂ

ಬೊಮ್ಮಾಯಿ
Advertisement

ವಿಜಯಪುರ: ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗಬೇಕು. ಆಗ ಮಾತ್ರ ರಾಜ್ಯದ ಗಟ್ಟಿ ಧ್ವನಿ ಎಲ್ಲೆಡೆ ಕೇಳುತ್ತದೆ. ಉತ್ತರ ದಕ್ಷಿಣ ಎಂಬ ಬೇಧಭಾವ ಇರಬಾರದು. ಎಲ್ಲಾ ಭಾಗಗಳು ಅಭಿವೃದ್ಧಿಯಾಗಬೇಕಾದರೆ ಸಮಗ್ರ ಕರ್ನಾಟಕದ ಬಗ್ಗೆ ನಾವು ಮಾತನಾಡಬೇಕು. ಈ ವಿಷಯವನ್ನು ಪತ್ರಕರ್ತರು ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ತಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ “37ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು, ಪತ್ರಕರ್ತರು ಹಾಗೂ ರಾಜಕಾರಣಿಗಳದ್ದು ಅವಿನಾಭಾವ ಸಂಬಂಧ ಪರಸ್ಪರರನ್ನು ಬಿಟ್ಟು ಕೆಲಸ ಮಾಡಲಾಗುವುದಿಲ್ಲ. ಸುದ್ದಿಯನ್ನು ಬಿಂಬಿಸುವ ಮೂಲಕ ನಮ್ಮ ಅಭಿಪ್ರಾಯಗಳನ್ನು ಬಿಂಬಿಸಿ, ಅಭಿಪ್ರಾಯಗಳ ಮೂಲಕ ನಮ್ಮ ವ್ಯಕ್ತಿತ್ವ ಮೂಡಿಸಲು ಪತ್ರಕರ್ತರು ಕಾರಣ. ರಾಜಕಾರಣಿಗಳು ಇಲ್ಲದಿದ್ದರೆ, ಪತ್ರಿಕೆಗಳನ್ನು ಯಾರೂ ಓದುತ್ತಿರಲಿಲ್ಲ. ಪ್ರಾಮಾಣಿಕ ಕಾರ್ಯನಿರತ ಸಂಬಂಧ. ಗಡಿಗಳನ್ನು ದಾಟದೇ ಇದ್ದಾಗ ಆರೋಗ್ಯಕರವಾದ ಸಂಬಂಧವಿರುತ್ತದೆ. ರಾಜಕಾರಣಿಗಳು ಮತ್ತು ಪತ್ರಕರ್ತರ ನಡುವೆ ಆರೋಗ್ಯಕರವಾದ ಸಂಬಂಧವಿದ್ದರೆ ರಾಜ್ಯದ ರಾಜಕಾರಣ ಹಾಗೂ ಆಡಳಿತ ಉತ್ತಮವಾಗಿರುತ್ತದೆ. ಪತ್ರಿಕೋದ್ಯಮ ಬಹಳಷ್ಟು ಬದಲಾವಣೆ ಕಂಡಿದೆ. ಪ್ರತಿಯೊಬ್ಬ ಓದುಗನೂ ಪತ್ರಕರ್ತನಾಗಿದ್ದಾನೆ. ಇಂಥ ಸಂದರ್ಭದಲ್ಲಿ ಪತ್ರಿಕೋದ್ಯಮವನ್ನು ಉಳಿಸಿಕೊಂಡು ಪತ್ರಕರ್ತರ ವೃತ್ತಿಯನ್ನು ಗಟ್ಟಿಗೊಳಿಸುವುದು ಸವಾಲಿನ ಕೆಲಸ. ವಿಶ್ವಾಸಾರ್ಹತೆ ಹಾಗೂ ಸಹಮತದಿಂದ ಇದು ಸಾಧ್ಯವಿದೆ. ಇದು ರಾಜಕಾರಣಿಗಳಿಗೂ ಅನ್ವಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್, ಟಿವಿ9 ಸುದ್ದಿ ವಾಚಕಿ ಸುಕನ್ಯಾ, ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿಯವರನ್ನು ಸನ್ಮಾನಿಸಿದರು.