ಇವಿ ರಾಜಧಾನಿ ಕರ್ನಾಟಕ

Advertisement

ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ. ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಇಂದು ವಿಶ್ವದ ಅತ್ಯಂತ ಮುಂದುರವರಿದ ಶಕ್ತಿಗಳ ಪೈಕಿ ಒಂದಾಗಿದೆ. ಕರ್ನಾಟಕದಲ್ಲಿ ಗರಿಷ್ಠ ಪ್ರಮಾಣದಲ್ಲಿ ವಿದ್ಯುತ್ ಚಾಲಿತ ವಾಹನಗಳು ಸಂಚರಿಸುತ್ತಿವೆ.
ಕರ್ನಾಟಕವು ಅತಿಹೆಚ್ಚು ನವೀಕರಿಸಬಹುದಾದ ಇಂಧನ ಉತ್ಪಾದನಿಸುತ್ತಿದೆ. 15 ಸಾವಿರ ಮೆಗಾವಾಟ್ ವಿದ್ಯುತ್ ಪರಿಸರ ಸ್ನೇಹಿ ವಿಧಾನಗಳಲ್ಲಿ ಉತ್ಪಾದನೆಯಾಗುತ್ತಿದೆ. ಒಟ್ಟು ವಿದ್ಯುತ್​ ಉತ್ಪಾದನೆಯ ಅರ್ಧದಷ್ಟು ಪರಿಸರ ಸ್ನೇಹಿ ವಿಧಾನದಲ್ಲಿಯೇ ಉತ್ಪಾದನೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಸರ ಇಂಧನಗಳ ಹೊಸ ಅವತಾರಗಳಿಗೆ ಕರ್ನಾಟಕ ತೆರೆದುಕೊಳ್ಳಲಿದೆ. ಹೈಡ್ರೋಜನ್ ಮತ್ತು ಅಮೋನಿಯಾ ಉತ್ಪಾದನೆಗೆ ವಿಶೇಷ ಒತ್ತು ಸಿಗಲಿದೆ ಎಂದು ಬೊಮ್ಮಾಯಿ ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಮಾದರಿಯ ವಾಹನಗಳು ಪರಿಚಯವಾಗಲಿದೆ. ಎಥೆನಾಲ್ ಬೆರೆತ ಇಂಧನದ ವಿಚಾರದಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಿದೆ. ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ಅಭಿವೃದ್ಧಿ ಇಂಧನ ಅತ್ಯಗತ್ಯ. ಪ್ರಧಾನಿ ಮೋದಿ ಅವರು ಇಂಧನದಲ್ಲಿ ಬದಲಾವಣೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅತಿಹೆಚ್ಚು ಶಕ್ತಿ, ಅತಿ ಕಡಿಮೆ ಮಾಲಿನ್ಯ ಎನ್ನುವ ಮೋದಿ ಕನಸನ್ನು ಕರ್ನಾಟಕ ನನಸು ಮಾಡುತ್ತದೆ ಎಂದು ಭರವಸೆ ನೀಡಿದರು.