ಮಹಿಳೆಯರ T20 ವಿಶ್ವಕಪ್ ನ ಗುಂಪು-ಬಿ ಪಂದ್ಯವು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಮಣಿಸಿದೆ. ಟಾಸ್ ಗೆದ್ದಿದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಈ ವೇಳೆ ಪಾಕಿಸ್ತಾನ ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ಗೆ 149 ರನ್ ಪೇರಿಸಿತು. ಈ ಗುರಿ ಬೆನ್ನತ್ತಿದ ಭಾರತ ತಂಡ 19 ಓವರ್ ನಲ್ಲಿ 151 ರನ್ ಕಲೆ ಹಾಕಿ ಗೆಲುವು ಸಾಧಿಸಿದೆ.