ನಾಳೆಯಿಂದ ಸರಕಾರಿ ನೌಕರರ ಮುಷ್ಕರ

ಮುಷ್ಕರ
Advertisement

ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳದೆ ಇರುವ ಹಿನ್ನೆಲೆಯಲ್ಲಿ ಮಾರ್ಚ್‌ 1ಕ್ಕೆ ಕೆಲಸಕ್ಕೆ ಗೈರಾಗಲು ಸರ್ಕಾರಿ ನೌಕರರು ಮುಂದಾಗಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ, ನಮ್ಮನ್ನು ಕೆಲಸದಿಂದ ವಜಾ ಮಾಡಲಿ, ಎಸ್ಮಾ ಜಾರಿಗೆ ತರಲಿ. ಆದರೆ, ನಾವು ಯಾವುದಕ್ಕೂ ಹೆದರುವುದಿಲ್ಲ. 7ನೇ ವೇತನ ಆಯೋಗ ಮತ್ತು ಒಪಿಎಸ್​ ಪಿಂಚಣಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಫೆಬ್ರವರಿ 23ರಿಂದ 28ರವರೆಗೆ ಏಳು ದಿನಗಳ ಕಾಲ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, 8 ದಿನಗಳಾದರೂ ಸರ್ಕಾರ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. ಹೀಗಾಗಿ, ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. ಅಲ್ಲದೇ ಕಳೆದ 9 ತಿಂಗಳಿನಿಂದಲೂ ಮನವಿ ಮಾಡುತ್ತಾ ಇದ್ದೇವೆ. ಇದು ಏಕಾಏಕಿ ನಿರ್ಧಾರವಲ್ಲ. ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರ ಸಂಘದ ತುರ್ತು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.