ಜೆಡಿಎಸ್‌ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ

ಜಮೀರ್
Advertisement

ಬೆಳಗಾವಿ: ಜೆಡಿಎಸ್‌ಗೆ ಒಂದೇ ಒಂದು ಮತ ಹಾಕಬೇಡಿ. ಜೆಡಿಎಸ್‌ಗೆ ಮತ ಹಾಕಿದರೆ ಅದು ಬಿಜೆಪಿಗೆ ಹಾಕಿದಂತೆ ಎಂದು ಜೆಡಿಎಸ್ ವಿರುದ್ಧ ಮಾಜಿ ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದರು.
ಬೆಳಗಾವಿ ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕೋವಿಡ್ ಸಂದರ್ಭದಲ್ಲಿ ಜನರಿಗೆ ಅನ್ನಭಾಗ್ಯ ಆಧಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ಮಾತ್ರ ರೈತರ ಸಾಲ ಮನ್ನಾ ಮಾಡಿದ್ದರು. ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ಪ್ರಿಂಟಿಂಗ್ ಮಷಿನ್ ಇಟ್ಟಿಲ್ಲ ಎಂದಿದ್ದರು. ಆದರೆ ಸಿದ್ದರಾಮಯ್ಯನವರು ಏನಾದರೂ ಪ್ರಿಂಟಿಂಗ್ ಮಷಿನ್ ಇಟ್ಟಿದ್ದರಾ? ರೈತರ ಪರ ಕಾಳಜಿಯಿಂದ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಿದರು ಎಂದು ಬಿಜೆಪಿ ವಿರುದ್ಧ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದರು.
ಕಾಂಗ್ರೆಸ್ ಎಂದಿಗೂ ಹಿಂದೂ ಮುಸ್ಲಿಂ ರಾಜಕಾರಣ ಮಾಡಿಲ್ಲ. ಅದೇ ಬಿಜೆಪಿಗರು ಹಿಂದೂ ಮುಸ್ಲಿಂ ಎಂದು ಮತ ಕೇಳುತ್ತಾರೆ. ಬಿಜೆಪಿಯವರು ಎಂದಿಗೂ ಅಭಿವೃದ್ಧಿ ಹೇಳಿ ಮತ ಕೇಳುವುದಿಲ್ಲ ಎಂದರು.