ಶಿವಾಜಿ ಪುತ್ಥಳಿ ಲೋಕಾರ್ಪಣೆ: ಲಕ್ಷ್ಮಿ ಹೆಬ್ಬಾಳ್ಕರ್ ಗೈರು

ಶಿವಾಜಿ
Advertisement

ಬೆಳಗಾವಿ: ತಾಲೂಕಿನ ಗ್ರಾಮೀಣ ವಿಧಾನಸಭಾ ಕ್ಷೇತ್ರ‌ ವ್ಯಾಪ್ತಿಯ ರಾಜಹಂಸಗಡ ಕೋಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಂದ ಅಧಿಕೃತ ಲೋಕಾರ್ಪಣೆ ಮಾಡಿದರು. ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮೂರ್ತಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 2013- 2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ಒಂದು ವೇಳೆ ಅನುದಾನ ನೀಡಿದ್ದರೆ ನಾಳೆ ಅವರನ್ನೇ ಕರೆತಂದು ಶಿವಾಜಿ ಮೂರ್ತಿ ಉದ್ಘಾಟನೆ ಮಾಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.


ಮಾ.5ರಂದು ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಶಿವಾಜಿ ಮೂರ್ತಿ ಉದ್ಘಾಟಿಸಬೇಕು ಎಂಬ ಸ್ಥಳೀಯ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಯೋಜನೆಗೆ ಹಿನ್ನೆಡೆ ಉಂಟಾಗಿದೆ. ತಮ್ಮದೇ ಕ್ಷೇತ್ರದ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗಮನ ಸೆಳೆದರು. ಇತ್ತ ಇಬ್ಬರೂ ಬದ್ಧ ವೈರಿಗಳಾದ ರಮೇಶ್ ಜಾರಕಿಹೊಳಿ‌ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಂದೇ ವೇದಿಕೆ ಕಾಣಿಸಿಕೊಳ್ಳವ ಲೆಕ್ಕಾಚಾರ ಇತ್ತು. ಆದ್ರೆ, ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಭಾಗಿಯಾಗಿದ್ದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೈರಾಗಿದ್ದಾರೆ.