ಪಂಚಮಸಾಲಿಗಳ ಪ್ರತಿಭಟನೆ : ರಾಷ್ಟ್ರೀಯ ಹೆದ್ದಾರಿ 4 ತಡೆದು ರಾಜ್ಯ ಸರಕಾರ ವಿರುದ್ದ ಆಕ್ರೋಶದ ಕಿಚ್ಚು

Advertisement

ಬೆಳಗಾವಿ : ಪಂಚಮಸಾಲಿ 2 ಎ ಮೀಸಲಾತಿ ಹೋರಾಟ ವಿಚಾರವಾಗಿ ಕೂಡಲಸಂಗಮ ದಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಂದ ಪ್ರತಿಭಟನೆಗೆ ಕರೆ ಹಿನ್ನೆಲೆ ನೂರಾರು ಪಂಚಮಸಾಲಿ ಸಮುದಾಯದ ಪದಾಧಿಕಾರಿಗಳು ಹತ್ತರಗಿಯ ಟೋಲ್ ಗೇಟ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಳಗಾವಿ ‌ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿಯ ಟೋಲ್ ನಾಕಾ ಬಳಿಯ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆದ ಪಂಚಮಸಾಲಿ ಸಮುದಾಯದ ನೂರಾರು ಪದಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪಂಚಮಸಾಲಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ. ಪಂಚಮಸಾಲಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹತ್ತರಗಿಯ ಟೋಲ್ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.
ಓರ್ವ ಸಿಪಿಐ, ಎರಡು ಪಿಎಸ್ಐ ಸೇರಿದಂತೆ ನೂರಕ್ಕು ಹೆಚ್ಚು ಪೊಲೀಸ್ ಸಿಬ್ಬಂಧಿಗಳನ್ನು ಇಲ್ಲಿ ಬಂದೋಬಸ್ತ್ ಗಾಗಿ ನಿಯೋಜನೆ ಮಾಡಲಾಗಿದೆ. ಏನೇ ಆಗಲಿ ಪಂಚಮಸಾಲಿಗಳು 2ಎ ಮೀಸಲಾತಿಯ ಈ ಕೊನೆಯ ಹಂತದ ಹೋರಾಟ ರಾಜ್ಯ ಸರಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಲಿದೆ ಎನ್ನಲಾಗಿದೆ.