ಮಾಡಾಳ್‌ ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು

ಮಾಡಾಳ
Advertisement

ಬೆಂಗಳೂರು: ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಲ್ಲದೇ 48 ಗಂಟೆಯಲ್ಲಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.
ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ನ್ಯಾಯಪೀಠ ಮಂಗಳವಾರ ನಡೆಸಿದರು. ಕೆ. ಮಾಡಾಳು ವಿರೂಪಾಕ್ಷಪ್ಪ ಪರವಾಗಿ ಕೆ. ಸಮನ್ ವಾದ ಮಂಡನೆ ಮಾಡಿದರು. ವಯಸ್ಸು ಆರೋಗ್ಯದ ಕಾರಣದ ಮೇಲೆ ಮಧ್ಯಂತರ ಜಾಮೀನು ನೀಡಿ ಎಂದು ಮನವಿ ಮಾಡಿದರು. ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ತನಿಖಾಧಿಕಾರಿಗಳ ಮುಂದೆ ಶಾಸಕರು ಹಾಜರಾಗಬೇಕು ಎಂದು ಸೂಚನೆ ನೀಡಿದರು. 5 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದರು. ಅಲ್ಲದೇ 48 ಗಂಟೆಯಲ್ಲಿ ಶಾಸಕರು ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದರು.