ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಇಂದು ವಿಶೇಷ ವಿಮಾನದ ಮೂಲಕ ಅಹ್ಮದಾಬಾದ್ಗೆ ಆಗಮಿಸಿದ್ದಾರೆ. ಬುಧವಾರ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ಕ್ರಿಕೆಟ್ ತಂಡದ ಮಧ್ಯೆ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯವನ್ನು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೀಕ್ಷಿಸಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತದ ಪಾಲಿಗೆ ಈ ಪಂದ್ಯ ನಿರ್ಣಾಯಕವಾಗಿದೆ.