ರಾಜ್ಯದಲ್ಲಿ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ, ಅದ್ಧೂರಿ ಆಚರಣೆ: ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Advertisement

ಮೈಸೂರು: ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಿಸಲಿದ್ದು, ರಾಜ್ಯದ ಮನೆಮನೆಗಳಲ್ಲಿ, ಅಂಗಡಿಮುಂಗಟ್ಟು, ಕಚೇರಿ, ಕೈಗಾರಿಕೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸುವ ಸ್ವಾತಂತ್ರ್ಯ ಹಬ್ಬದ ಸಂಭ್ರಮದೊಂದಿಗೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿಯೊಂದು ಗ್ರಾಮಪಂಚಾಯತಿಯೂ ಸೇರಿದಂತೆ ಇಡೀ ರಾಜ್ಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಹರಘರ್ ತಿರಂಗಾ ಕಾರ್ಯಕ್ರಮದಡಿ 1 ಕೋಟಿಗಿಂತ ಹೆಚ್ಚು ಧ್ವಜಗಳನ್ನು ಗ್ರಾಮ ಪಂಚಾಯತಿಗಳಿಗೆ ವಿತರಿಸಲಾಗಿದ್ದು, ತಲಾ 400ರಿಂದ 500 ಧ್ವಜಗಳನ್ನು ಪ್ರತಿ ಗ್ರಾಮ ಪಂಚಾಯತಿಗೆ ವಿತರಣೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವ ಮತ್ತು ದೇಶ ಕಟ್ಟುವ ಸಂಕಲ್ಪದ ವಿಚಾರಗಳನ್ನು ಕರ್ನಾಟಕದ ರಾಜ್ಯದೆಲ್ಲೆಡೆ ಇದೇ ಆಗಸ್ಟ್ 15ರಿಂದ ಮುಂದಿನ ಆಗಸ್ಟ್ 15ರ ವರೆಗೂ ಪ್ರಧಾನಿ ಮೋದಿಯವರ ಅಮೃತಕಾಲದ ಕಲ್ಪನೆಯನ್ನು ಪ್ರಚಾರ ಮಾಡುವ ವಿಶೇಷ ಕಾರ್ಯಕ್ರಮವನ್ನು ರಾಜ್ಯಸರ್ಕಾರ ಹಮ್ಮಿಕೊಂಡಿದೆ ಎಂದರು.