ಕ್ರಿಪ್ಕೋ ಕರೆನ್ಸಿ ವಂಚನೆ – ಸೆರೆ

Advertisement

ಮಂಗಳೂರು: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಕೊಂಡು ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು ಹಲವಾರು ಮಂದಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಹಣ ಲಾಭ ಗಳಿಸಬಹುದು ಎಂದು ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿಕೊಂಡು ತಿಂಗಳಿಗೆ ಶೇ. ೨೫ ಲಾಭಾಂಶವನ್ನು ನೀಡುವುದಾಗಿ ಮಂಗಳೂರು ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಹಮವನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿಕೊಂಡು ಲಾಭಾಂಶವನ್ನು ನೀಡದೇ ವಂಚನೆ ಮಾಡಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ರಾಜೇಂದ್ರ, ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.