ವಿಜಯಪುರ: 4.64 ಲಕ್ಷ ಮನೆಗಳಿಗೆ ಕುಡಿವ ನೀರು ಒದಗಿಸುವ ಗುರಿ

Bommai
Advertisement

ವಿಜಯಪುರ(ಮುದ್ದೇಬಿಹಾಳ): ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಿಲ್ಲಾಡಳಿತ ವಿಜಯಪುರ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತಾವಾಡ ಪಟ್ಟಣದಲ್ಲಿ ಆಯೋಜಿಸಿರುವ “ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಕಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ” ಕಾರ್ಯವನ್ನು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ನೆರವೇರಿಸಿ ಮಾತನಾಡಿದರು.
ಜಲಜೀವನ್ ಮಿಷನ್ ಅಡಿಯಲ್ಲಿ ದೇಶದಲ್ಲಿ 12 ಕೋಟಿ ಮನೆಗಳಿಗೆ ನೀರು ಒದಗಿಸಲಾಗಿದೆ. ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲಾಗಿದೆ. ಮುಂದಿನ ವರ್ಷ 25 ಲಕ್ಷ ಮನೆಗಳಿಗೆ ನೀರು ಒದಗಿಸಲಾಗುತ್ತಿದೆ ಎಂದರು. ಜಲಧಾರೆಯಲ್ಲಿ ನಗರ ಪ್ರದೇಶಗಳಲ್ಲಿ 3000 ಕೋಟಿ ರೂ.ಗಳನ್ನು ಒಡಗಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಪ್ರದೇಶಗಲ್ಲಿ ನೀರು ಒದಗಿಸುವ ಚಿಂತನೆ ನಮ್ಮದು ಎಂದರು.