ಮಂಡ್ಯ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಆಗಮನಿಸಿದ್ದು, ರೋಡ್ಶೋ ಆರಂಭಿಸಿದ್ದಾರೆ. ರೋಡ್ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ ಥಿಯೇಟರ್ವರೆಗೆ ಬುಲ್ಡೋಜರ್ ಬಾಬಾ ಎಂದೇ ಕರೆಯಲ್ಪಡುವ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಆರಂಭವಾಗಿದೆ.