ಜೆಡಿಎಸ್ ಶಾಸಕರ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ‌

Advertisement

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಖಾಸಗಿ‌ ಭವನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ಮಹಿಳಾ ಕಾರ್ಯಕರ್ತೆಯರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿ, ಜೆಡಿಎಸ್ ಶಾಸಕರುಗಳಿಗೆ ಅಭಿವೃದ್ದಿ ಬೇಕಾಗಿಲ್ಲ. ಸಂಸದೆ ವಿರುದ್ದ ಮಾತನಾಡುವುದೇ ಅವರ ಕಾಯಕ ಎಂಬಂತೆ ವರ್ತಿಸುತ್ತಿದ್ದಾರೆ.
ಅಕ್ರಮ ಗಣಿಗಾರಿಕೆ ವಿರುದ್ದ ನಾನು ಧ್ವನಿಯೆತ್ತಿದರೆ ನನ್ನ ಪರವಾಗಿ ಅವರು ಧ್ವನಿಗೂಡಿಸಲಿಲ್ಲ. ನನ್ನ ವಿರುದ್ದವೇ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದರು. ಅಂದರೆ ಏನರ್ಥ ಅವರೂ ಅಕ್ರಮ ಗಣಿಗಾರಿಕೆಯಲ್ಲಿ ಪಾಲುದಾರರಲ್ಲವೇ ಎಂದು ಪರೋಕ್ಷವಾಗಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಸಿ.ಎಸ್.ಪುಟ್ಟರಾಜು ವಿರುದ್ದ ಹರಿಹಾಯ್ದರು. ಕ್ಷೇತ್ರದ ಜನತೆ ಕುಟುಂಬ ರಾಜಕಾರಣಕ್ಕೆ ತೆರೆ ಎಳೆಯಬೇಕಿದ್ದು, ಮೊದಲ ಭಾರಿಗೆ ಚುನಾವಣಾ ಕಣಕ್ಕೆ ಧುಮುಕಿರುವ ಬಿಜೆಪಿ‌ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಬಿಜೆಪಿ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ, ಬಿಜೆಪಿ‌ ರಾಜ್ಯಕಾರಿಣಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ತಾಲ್ಲೂಕು ಅಧ್ಯಕ್ಷ ಪೀಹಳ್ಳಿ ರಮೇಶ್ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.