ಕೃಷ್ಣಾ ನದಿಗೆ 3 ಟಿಎಂಸಿ ನೀರು ಹರಿಸಿದ ಮಹಾರಾಷ್ಟ್ರ

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ರಾಜಾಪುರದಿಂದ ಕರ್ನಾಟಕ ವ್ಯಾಪ್ತಿಯ ಕೃಷ್ಣಾ ನದಿಗೆ ನೀರು ಬರುವ ಸ್ಥಳಕ್ಕೆ ಭೇಟಿ ನೀಡಿ ನೆರೆದಿದ್ದ ರೈತರು ಹಾಗೂ ಕಾರ್ಯಕರ್ತರೊಂದಿಗೆ ಸಂತಸ ಹಂಚಿಕೊಂಡರು.
Advertisement

ಅಥಣಿ: ಬೇಸಿಗೆ ಅವಧಿಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿದ ಮಹಾರಾಷ್ಟ್ರ ಸರಕಾರ ರಾಜಾಪುರ ಬ್ಯಾರೇಜ್ ಮೂಲಕ ಕೃಷ್ಣಾ ನದಿಗೆ ಸೋಮವಾರ ಬೆಳಗ್ಗೆ ೩ ಟಿಎಂಸಿ ನೀರು ಹರಿಸಿದೆ.
ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಈಚೆಗೆ ಭೇಟಿ ಮಾಡಿ ಮನವರಿಕೆ ಮಾಡಿದ್ದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸಮಿಶ್ರ ಸರಕಾರ ಅಸ್ತಿತ್ವದಲ್ಲಿರುವುದು ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೀರಾವರಿ ಸಚಿವರಾಗಿದ್ದು, ಗಡಿಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿದ್ದಾರೆ. ಇದೇ ವೇಳೆ ಅಥಣಿ ಶಾಸಕ ಶ್ರೀಮಂತ ಪಾಟೀಲ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಇತರರು ರಾಜ್ಯಕ್ಕೆ ಆಗಮಿಸಿದ್ದ ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಮನವಿ ಮಾಡಿದ ವಾರದೊಳಗೆ ಸಚಿವರು ಸ್ಪಂದಿಸಿರುವುದು ಕೃಷ್ಣಾ ತೀರದ ಗ್ರಾಮಗಳ ರೈತರಲ್ಲಿ ಹರ್ಷವನ್ನುಂಟು ಮಾಡಿದೆ.