ಹೆಲಿಕಾಪ್ಟರ್‌ ಗಾಜು ಪುಡಿಪುಡಿ: ಡಿಕೆ ಶಿವಕುಮಾರ್ ಪಾರು

Advertisement

ಬೆಂಗಳೂರು: ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್‌ ಇದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್‌ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್‌ಎಎಲ್‌ ಏರ್‌ಪೋರ್ಟ್‌ನಲ್ಲಿ ಹೆಲಿಕಾಪ್ಟರ್‌ ಅನ್ನು ತುರ್ತು ಲ್ಯಾಂಡಿಂಗ್‌ ಮಾಡಲಾಗಿದೆ. ಚುನಾವಣಾ ಪ್ರಚಾರಕ್ಕೆ ಎಂದು ಅವರು ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್‌ ಏರಿದ್ದರು. ಜಕ್ಕೂರಿನಿಂದ ಹೆಲಿಕಾಪ್ಟರ್‌ ಟೇಕಾಫ್‌ ಆಗಿ ಹೊಸಕೋಟೆ ಬಳಿ ಹೋಗುತ್ತಿದ್ದಾಗ ಹದ್ದೊಂದು ಡಿಕ್ಕಿ ಹೊಡೆದಿದೆ. ಹದ್ದು ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್‌ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಕೂಡಲೇ ಎಚ್ಚೆತ್ತ ಪೈಲಟ್‌ ಎಚ್‌ಎಎಲ್‌ನಲ್ಲಿ ಹೆಲಿಕಾಪ್ಟರ್‌ ಅನ್ನು ತುರ್ತು ಭೂಸ್ಪರ್ಶ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೆಲಿಕಾಪ್ಟರ್‌ನಲ್ಲಿ 4 ಮಂದಿ ಪ್ರಯಣಿಸುತ್ತಿದ್ದರು. ಹೆಲಿಕಾಪ್ಟರ್‌ನಿಂದ ಇಳಿದ ಡಿಕೆ ಶಿವಕುಮಾರ್‌ ಕಾರು ಮೂಲಕ ಮುಳಬಾಗಿಲು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.