ಗೋಲ್ಡನ್ ಟೆಂಪಲ್ ಬಳಿ ಭಾರಿ ಸ್ಫೋಟ

Advertisement

ಅಮೃತಸರ : ಗೋಲ್ಡನ್ ಟೆಂಪಲ್ ಬಳಿಯ ಹೆರಿಟೇಜ್ ಸ್ಟ್ರೀಟ್‌ನಲ್ಲಿ ನಿನ್ನೆ ತಡರಾತ್ರಿ (ಶನಿವಾರ) ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದೆ, ಪಂಜಾಬ್‌ನ ಅಮೃತಸರದಲ್ಲಿರುವ ಸಿಖ್ಖರ ಧಾರ್ಮಿಕ ಕೆಂದ್ರವಾದ ಹಾಗೂ ಖ್ಯಾತ ಪ್ರವಾಸಿ ತಾಣವಾದ ಗೋಲ್ಡನ್ ಟೆಂಪಲ್ ಬಳಿ ಈ ಘಟನೆ ಸಂಭವಿಸಿದ್ದು, ಸ್ಫೋಟಕ್ಕೆ ಈವರೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಈ ಸ್ಫೋಟದಲ್ಲಿ 6 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಸಿಟಿವಿಯಲ್ಲಿ ಕಂಡ ಸ್ಪೋಟದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.