71 ಸಾವಿರಕ್ಕೂ ಅಧಿಕ ಯುವಕರಿಗೆ ನೇಮಕಾತಿ ಪತ್ರ ವಿತರಣೆ

Advertisement

ಬೆಂಗಳೂರು: ರಾಜ್ಯದ ಜನರ ಬೇಡಿಕೆಗೆ ಅನುಗುಣವಾಗಿ ನಮ್ಮ ಕೇಂದ್ರ ಸರಕಾರ ಮುಂದೆಯೂ ಕಾರ್ಯ ನಿರ್ವಹಿಸಲಿದೆ. ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಕೇಂದ್ರ ಸರಕಾರ ಸದಾ ಬದ್ಧವಾಗಿದ್ದು, ಯುವಜನತೆಯ ಕೌಶಲ್ಯ ಅಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹೊಸದಾಗಿ 71 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿದರು.
ರಾಜ್ಯದಲ್ಲಿ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರು ಸೇರಿದಂತೆ ಮೂರು ಭಾಗದಲ್ಲಿ ಮೇಳ ನಡೆಯುತ್ತಿದೆ. ದೇಶಾದ್ಯಂತ ಒಟ್ಟು 45 ಸ್ಥಳದಲ್ಲಿ ರೋಜ್ ಗಾರ್ ಮೇಳ ನಡೆಯುತ್ತಿದ್ದು, ಬೆಂಗಳೂರಿನ ಸೆಂಟ್ರಲ್ ಕಾಲೇಜು ಕ್ಯಾಂಪಸ್​ನಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು. ಗ್ರಾಮೀಣ ಡಾಕ್ ಸೇವಕ್, ಅಂಚೆ ನೀರಿಕ್ಷಕರು, ತೆರಿಗೆ ಸಹಾಯಕರು, ಇನ್ಸ್​​ ಪೆಕ್ಟರ್, ನರ್ಸಿಂಗ್, ಸಹಾಯಕ ಲೆಕ್ಕಪರಿಶೋಧಕ, ಜೂನಿಯರ್ ಅಕೌಂಟ್ ಕ್ಲರ್ಕ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪ್ರಾಂಶುಪಾಲ ಸೇರಿದಂತೆ ವಿವಿಧ ಹುದ್ದೆಗಳು ಸೇರ್ಪಡೆಗೊಳ್ಳಲಿದೆ. ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಿಗೆ ಹೊಸದಾಗಿ ಸೇರ್ಪಡೆಗೊಂಡವರಿಗೆ ರೋಜ್ ಗಾರ್ ಮೇಳದ ಅಡಿಯಲ್ಲಿ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು.