ನೂತನ ಸಂಸತ್ ಭವನ ಲೋಕಾರ್ಪಣೆ

Advertisement

ನವದೆಹಲಿ: ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಪವಿತ್ರ ರಾಜದಂಡ ಸೆಂಗೋಲ್ ನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ಪ್ರತಿಷ್ಟಾಪನೆ ಮಾಡಿದರು.


ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿರು ಮೋದಿಯವರು, ಭಾರತದ ಸಂಸತ್ತಿನ ಹೊಸ ಕಟ್ಟಡ ಉದ್ಘಾಟನೆಗೊಂಡಿದ್ದು, ಈ ಮೂಲಕ ನಮ್ಮ ಹೃದಯ ಮತ್ತು ಮನಸ್ಸು ಹೆಮ್ಮೆ, ಭರವಸೆಯಿಂದ ತುಂಬಿವೆ. ಈ ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲು ಆಗಿರಲಿ, ಕನಸುಗಳ ರೂಪಿಸುವ ಮತ್ತು ಅವುಗಳನ್ನು ವಾಸ್ತವಕ್ಕೆ ತರುವುದನ್ನು ಇದು ಖಾತರಿಪಡಿಸುತ್ತದೆ. ಇದು ನಮ್ಮ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಹೇಳಿದ್ದಾರೆ.


ಲೋಕಸಭೆಯ ಸ್ಪೀಕರ್​ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್​ ಸಿಂಗ್​, ಪ್ರಲ್ಹಾದ್​​ ಜೋಶಿ ಮತ್ತು ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್​ ರೆಡ್ಡಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ನೂತನ ಸಂಸತ್​ ಭವನ ನಿರ್ಮಾಣ ಮತ್ತು ಸಿಂಗೋಲ್​ ನಿರ್ಮಾಣದ ಕುರಿತಾದ ಕುರಿತಾದ ಕಿರುಚಿತ್ರ ಪ್ರದರ್ಶನವಾಯಿತು.