ಇಲಾಖೆಗಳಲ್ಲಿ ಕನ್ನಡದ ಅನುಷ್ಟಾನ ಕಡ್ಡಾಯವಾಗಿ ಶೇ.100ರಷ್ಟು ಜಾರಿಯಾಗಬೇಕು :ಟಿ.ಎಸ್. ನಾಗಾಭರಣ

Advertisement

ಶಿವಮೊಗ್ಗ: ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‍ಸೈಟ್‍ಗಳಲ್ಲಿ ಮತ್ತು ತಂತ್ರಾಂಶಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯವಾಗಿ ಪ್ರಥಮ ಆದ್ಯತೆಯನ್ನು ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಕನ್ನಡ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕೆಲವು ಇಲಾಖೆಗಳ ವೆಬ್‍ಸೈಟ್‍ನಲ್ಲಿ ಮುಖಪುಟದಲ್ಲಿ ಕನ್ನಡ ಭಾಷೆ ಬಳಕೆ ಇದ್ದರೂ, ಮಾಹಿತಿಗಳು ಇಂಗ್ಲಿಷ್ ಭಾಷೆಯಲ್ಲಿವೆ. ವೆಬ್‍ಸೈಟ್‍ಗಳಲ್ಲಿ ಪ್ರತಿ ಮಾಹಿತಿ ಕೂಡಾ ಕನ್ನಡದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಇದೇ ರೀತಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸುವ ತಂತ್ರಾಂಶಗಳಲ್ಲಿ ಸಹ ಕಡ್ಡಾಯವಾಗಿ ಕನ್ನಡವನ್ನು ಅಳವಡಿಸಬೇಕು. ಜನಸಾಮಾನ್ಯರಿಗೆ ನೇರವಾಗಿ ಸೇವೆಯನ್ನು ಒದಗಿಸುವ ಇಲಾಖೆಗಳಲ್ಲಿ ಕನ್ನಡದ ಅನುಷ್ಟಾನ ಕಡ್ಡಾಯವಾಗಿ ಶೇ.100ರಷ್ಟು ಜಾರಿಯಾಗಬೇಕು ಎಂದು ತಿಳಿಸಿದ್ದಾರೆ.