ವಿದ್ಯುತ್ ದರ ಏರಿಕೆ: ಹಿಂದಿನ ಸರ್ಕಾರದ ನಿರ್ಧಾರ

Advertisement

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ವಿದ್ಯಿತ್‌ ದರ ಏರಿಕೆಯಾಗಿತ್ತು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್​ ಹೇಳಿದ್ದಾರೆ. ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಮುಂಚೆ ಕೆಳವರ್ಗ ಮಾತ್ರ ತೊಂದರೆಯಲ್ಲಿತ್ತು ಇತ್ತಿಚೆಗೆ ಮದ್ಯಮ ವರ್ಗ ಸಹ ತೊಂದರೆಯಲ್ಲಿ ಸಿಲುಕಿದ್ದು ಅವರೆಲ್ಲರ ನೆರವಿಗಾಗಿ ಈ ಗ್ಯಾರಂಟಿಗಳು ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ ಚುನಾವಣೆ ಮುಗಿದ ನಂತರ ಇಂದಿನ ಸರ್ಕಾರದ ವಿದ್ಯುತ್​ ದರ ಏರಿಕೆ ಆದೇಶ ಜಾರಿಗೆ ಬಂದಿದೆ ಎಂದರು.