ಡಾ. ಪ್ರಭಾಕರ ಕೋರೆಗೆ ರಾಷ್ಟ್ರಮಟ್ಟದ ಶ್ರೀ ವೀರಭದ್ರೇಶ್ವರ ಪ್ರಶಸ್ತಿ

ವೀರಭದ್ರೇಶ್ವರ ಪ್ರಶಸ್ತಿ
Advertisement

ಬೆಳಗಾವಿ: ವೀರಶೈವ ಲಿಂಗಾಯತ ಸಂಘಟನ ವೇದಿಕೆಯಿಂದ ಡಾ. ಪ್ರಭಾಕರ ಕೋರೆಯವರಿಗೆ ರಾಷ್ಟ್ರಮಟ್ಟದ ಶ್ರೀ ವೀರಭದ್ರೇಶ್ವರ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದೆ.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಸೆಪ್ಟೆಂಬರ್ 13ರಂದು ಬೆಂಗಳೂರಿನ ಅರಮನ ಮೈದಾನ ನಲ್ಪಾಡ್ ಮೈದಾನದಲ್ಲಿ ವೀರಭದ್ರೇಶ್ವರ ಜಯಂತಿ-೨೦೨೨ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಮಾರಂಭಕ್ಕೆ ರಾಷ್ಟ್ರದ ಎಲ್ಲಡೆಯಿಂದ ಸಂಘಟನೆಯ ಸದಸ್ಯರು ಆಗಮಿಸುತ್ತಿದ್ದು ನಾಡಿನ ಅನೇಕ ರಾಜಕೀಯ ಹಾಗೂ ಸಾಮಾಜಿಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಶೈಕ್ಷಣಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ಆಗಾಧ ಸೇವೆ ಮಾಡಿರುವ ಉತ್ತರ ಕರ್ನಾಟಕದ ಧೀಮಂತ ನಾಯಕ ಡಾ. ಪ್ರಭಾಕರ ಕೋರೆಯವರಿಗೆ ಸಮಾರಂಭದಲ್ಲಿ ಪ್ರಸ್ತುತ ವರ್ಷದ ರಾಷ್ಟ್ರಮಟ್ಟದ ಶ್ರೀ ವೀರಭದ್ರೇಶ್ವರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.
ಸಮಾರಂಭದಲ್ಲಿ ಉಪಸ್ಥಿತರಿರುವ ಉಜ್ಜಯಿನಿ ಪೀಠದ ಶ್ರೀಗಳಾದ ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.