ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌: ಬಿಜೆಪಿ ಕಾರ್ಯಕರ್ತೆ ಬಂಧನ

Advertisement

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಒಡಿಶಾದ ಬಾಲಾಸೋರ್​ನಲ್ಲಿ ಸಂಭವಿಸಿದ್ದ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಇವರೇ ಕಾರಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಸೀದಿ ಫೋಟೋ ಹಾಕಿದ್ದರು. ಈ ಫೋಸ್ಟ್ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅಲ್ಲದೇ ಈ ಬಗ್ಗೆ ಒಡಿಶಾ ಪೊಲೀಸರು ಮಾಹಿತಿ ಮಾಹಿತಿ ಸಂಗ್ರಹಿಸಿದ್ದರು.