ಚಿತ್ರದುರ್ಗ: ಕಲುಷಿತ ನೀರು ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ಸಿದ್ದರಾಮಯ್ಯ
Advertisement

ಚಿತ್ರದುರ್ಗ: ಕಾವಾಡಿಗರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತ 3 ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ, ಈ ಕರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು “ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ.” ಎಂದಿದ್ದಾರೆ.