ಕಾವೇರಿ ನೀರು: ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ

Advertisement

ಶ್ರೀರಂಗಪಟ್ಟಣ: ತಮಿಳುನಾಡಿಗೆ ಕಾವೇರಿ‌ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಶ್ರೀರಂಗಪಟ್ಟಣದಲ್ಲಿ ರೈತ ಮುಖಂಡರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಪಟ್ಟಣದ ಕುವೆಂಪು ವೃತ್ತದ ಬಳಿಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರ ಹಾಗೂ ಉಪ ಮುಖ್ಯಮಂತ್ರಿ ಡಿ.ಕಿ.ಶಿವಕುಮಾರ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಕನ್ನಂಬಾಡಿ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕಡಿಮೆಯಿದೆ. ರಾಜ್ಯದ ರೈತರ ಹಿತ ಕಾಪಾಡದ ರಾಜ್ಯ ಸರ್ಕಾರ, ಅವರು ಕೇಳುವ ಮುನ್ನವೇ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಸರಿಯಲ್ಲ. ಈ ಬಗ್ಗೆ ನ್ಯಾಯಾಲಯ ಹಾಗೂ ಕಾವೇರಿ ನೀರು ಹಂಚಿಕೆ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಟ್ಟು, ರಾಜ್ಯದ ಜನ-ಜಾನುವಾರುಗಳ ರಕ್ಷಣೆಗೆ ಮುಂದಾಗಬೇಕು. ಕೂಡಲೇ ಎಚ್ಚೆತ್ತುಕೊಂಡು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸದಿದ್ದರೆ ಎಲ್ಲೆಡೆ ರೈತರು ಸರ್ಕಾರಕ್ಕೆ ಬುದ್ದಿ ಕಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.