ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ

Advertisement

ಬೆಂಗಳೂರು: ನಗರದ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರು ಉದ್ಘಾಟಿಸಿ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ಮಾಡಿದರು.
ಇದೇ ವರ್ಷ ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ನಿರ್ಮಾಣ ಕಾರ್ಯ ಮೇ 3ರ ಒಳಗಡೆಯೇ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಸಂಪರ್ಕ ಸಂಬಂಧ ಎರಡು ತಿಂಗಳು ಸಮಯ ತೆಗೆದುಕೊಂಡಿದೆ. ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ.