ತಮಿಳುನಾಡಿಗೆ ನೀರು: ಶ್ರೀರಂಗಪಟ್ಟಣದಲ್ಲಿ ಕಾವೇರಿ ನೀರಿನ ಮೇಲೆ ಆಣೆ ಮಾಡಿ ಅರೆಬೆತ್ತಲೆ ಪ್ರತಿಭಟನೆ

Advertisement

ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಶ್ರೀರಂಗಪಟ್ಟಣದಲ್ಲಿ ರೈತ ಮುಖಂಡರು ಕಾವೇರಿ ನೀರಿನ ಮೇಲೆ ಆಣೆ ಮಾಡಿ ನಿರಂತರ ಹೋರಾಟ ಮಾಡುವುದಾಗಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಹಾಗೂ ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ನೇತೃತ್ವದಲ್ಲಿ ಪಟ್ಟಣದ ಸ್ನಾನಘಟ್ಟ ಬಳಿಯ ಕಾವೇರಿ ನದಿಗಿಳಿದು ನೀರಿನ ರಕ್ಷಣೆಗಾಗಿ ನಿರಂತರ ಹೋರಾಟ ಮಾಡುವುದಾಗಿ ನೀರು ಹಿಡುದು ಆಣೆ ಮಾಡಿದ ನೂರಾರು ರೈತ ಮುಖಂಡರು ಸರ್ಕಾರದ ವಿರುದ್ದ ಘೋಷಣೆ ಕೂಗಿ‌ ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯ ಸರ್ಕಾರದ ವೈಫಲ್ಯತೆಯಿಂದಾಗಿ ತಮಿಳುನಾಡಿಗೆ ನೀರು ಬಿಡುವಂತಾಗಿದ್ದು, ಸರ್ಕಾರಕ್ಕೆ ರಾಜ್ಯದ ಹಿತ ಕಾಪಾಡುವ ಬದ್ದತೆಯಿದ್ದರೆ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಲಿ. ಇಲ್ಲದಿದ್ದರೆ ನಿರಂತರ ಹೋರಾಟದ ಮೂಲಕ‌ ಕಾವೇರಿ ನೀರನ್ನು ರಕ್ಷಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾವೇರಿ ನೀರು ಪ್ರಾಧಿಕಾರದ ವಿರುದ್ದ ಘೋಷಣೆ ಕೂಗಿ ಅವರ ಕಾರ್ಯವೈಖರಿಯನ್ನು ಖಂಡಿಸಿದರು. ಬಳಿಕ ಅಂಬೇಡ್ಕರ್ ವೃತ್ತದವರೆಗೂ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ ರೈತ ಮುಖಂಡರು, ತಾಲ್ಲೂಕು ಕಚೇರಿ ಎದುರು ಧರಣಿ ಕುಳಿತು ಸರ್ಕಾರದ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.