ನೆಲ-ಜಲ-ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ

Advertisement

ಶಿವಮೊಗ್ಗ: ನೆಲ-ಜಲ-ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ ಎಂದು ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಡಿಜಿಟಲ್ ಸೂಚನಾ ಫಲಕದಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಟ್ವೀಟ್‌ ಮಾಡಿರುವ ಅವರು ಕನ್ನಡವೇ ಸತ್ಯ-ಕನ್ನಡವೇ ನಿತ್ಯ! ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿನ ಮಾಹಿತಿ ಫಲಕ. ನೆಲ-ಜಲ-ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ🙏. ಎಂದಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಡಿಜಿಟಲ್ ಸೂಚನಾ ಫಲಕ ಅಳವಡಿಸಲಾಗಿದ್ದು, ಅದರಲ್ಲಿ ಹಿಂದಿಯಲ್ಲಿ ಪ್ರಕಟಣೆಯನ್ನು ಪ್ರಕಟಿಸಿರುವ ಕುರಿತು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಇದು ಹಿಂದಿ ರಾಜ್ಯವಲ್ಲ, ಇದು ಕರ್ನಾಟಕ. ಇಲ್ಲಿ ಹಿಂದಿ ಭಾಷೆಯ ಅಗತ್ಯವಿಲ್ಲ. ಇದನ್ನು ತೆಗೆದು ಹಾಕಬೇಕು. ಕನ್ನಡದಲ್ಲಿ ಪ್ರಕಟಣೆಯನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿ ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಟ್ವೀಟನ್ನು ಟ್ಯಾಗ್ ಜಾಲತಾಣದಲ್ಲಿ ಮಾಡಿದ್ದರು, ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಎಂ.ಬಿ.ಪಾಟೀಲ್ ಕನ್ನಡ ಮತ್ತು ಇಂಗ್ಲೀಷ್‌ಗೆ ಮಾತ್ರ ಆದ್ಯತೆ ನೀಡಲಾಗುವುದು. ಇದು ನನ್ನ ಗಮನಕ್ಕೆ ಬಂದಿಲ್ಲ. ನಾನು ಖಂಡಿತವಾಗಿಯೂ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಕನ್ನಡ ಹಾಗೂ ಇಂಗ್ಲಿಷ್ ಭಾಷೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಟ್ವೀಟ್ ಮಾಡಿದ್ದರು. ಈಗ ಫಲಕದಲ್ಲಿ ಕನ್ನಡ ಭಾಷೆ ಇರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.