ಹಾಲಶ್ರೀ ಸ್ವಾಮೀಜಿ 10 ದಿನ ಪೊಲೀಸ್ ಕಸ್ಟಡಿಗೆ

Advertisement

ಬೆಂಗಳೂರು: ವಂಚನೆ ಪ್ರಕರಣದ ಆರೋಪಿ ಹಾಲಶ್ರೀ ಸ್ವಾಮೀಜಿಗೆ 10 ದಿನ ಪೊಲೀಸ್ ಕಸ್ಟಡಿಗೆ ವಹಿಸಿ 19ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮಾರುವೇಷದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿದ್ದ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಪೊಲೀಸ್ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಂ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.