ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ: ಪ್ರಧಾನಿ ಮೋದಿಗೆ ಸನ್ಮಾನ

Advertisement

ನವದೆಹಲಿ: ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರವಾದ ಹಿನ್ನಲೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದಿಂದ ಪ್ರಧಾನಿ ಮೋದಿಗೆ ಸನ್ಮಾನ ಮಾಡಲಾಯಿತು. ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ ಹಿನ್ನಲೆ ಟ್ವೀಟ್​ ಮೂಲಕ ದೇಶದ 140 ಕೋಟಿ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಧನ್ಯವಾದ ತಿಳಿಸಿದ್ದಾರೆ. ‘ಮಹಿಳಾ ಮೀಸಲಾತಿ ಬಿಲ್​ ಅಂಗೀಕಾರಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ. ಉಭಯ ಸದನಗಳ ಸದಸ್ಯರಿಗೂ ಅಭಿನಂದನೆ ತಿಳಿಸಿದ್ದಾರೆ.
ಸುಮಾರು 11 ಗಂಟೆಗಳ ಚರ್ಚೆಯ ನಂತರ ಮಹಿಳಾ ಮೀಸಲಾತಿ ಮಸೂದೆಯು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಈ ಮಸೂದೆಯನ್ನು ಲೋಕಸಭೆ ಬುಧವಾರ ಅಂಗೀಕರಿಸಿತ್ತು. ರಾಷ್ಟ್ರಪತಿ ಅಂಕಿತವಾದ ಬಳಿಕ ಇನ್ನು ಮುಂದೆ ಇದು ಕಾನೂನಾಗಿ ಜಾರಿಗೆ ಬರಲಿದೆ. ಲೋಕಸಭೆಯಲ್ಲಿ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಾನೂನಾಗಿ ಜಾರಿಯಾಗಲಿದೆ. ನೂತನ ಸಂಸತ್ ಭವನದಲ್ಲಿ ಅಂಗೀಕಾರಗೊಂಡ ಮೊದಲ ಮಸೂದೆ ಇದಾಗಿದೆ.