ವಿಶ್ವಕಪ್​ ಕ್ರಿಕೆಟ್: ಉದ್ಘಾಟನಾ ಸಮಾರಂಭ ಮುಂದೂಡಿಕೆ

Advertisement

ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್​ ಕ್ರಿಕೆಟ್ ಟೂರ್ನಿ ಉದ್ಘಾಟನ ಸಮಾರಂಭ ರದ್ದುಗೊಂಡಿದೆ.
ಅಕ್ಟೋಬರ್ 4 ರಂದು ವಿಶ್ವಕಪ್‌ 2023 ಉದ್ಘಾಟನಾ ಸಮಾರಂಭ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಹೇಳಲಾಗಿತ್ತು. ಈ ಅವಧಿಯಲ್ಲಿ ಎಲ್ಲಾ 10 ತಂಡಗಳ ನಾಯಕರು ಉಪಸ್ಥಿತರಿರುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಅಕ್ಟೋಬರ್ 4 ರಂದು ಆಯೋಜಿಸಿದ್ದ ಉದ್ಘಾಟನಾ ಸಮಾರಂಭ ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ.
ಉದ್ಘಾಟನ ಸಮಾರಂಭವನ್ನು ಅಕ್ಟೋಬರ್ 14ರಂದು ಅಹಮದಾಬಾದ್​ನಲ್ಲಿ ನಡೆಯುವ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯದ ವೇಳೆ ಅದ್ಧೂರಿ ಸಮಾರಂಭವನ್ನು ಮಾಡಲು ಬಿಸಿಸಿಐ ಮುಂದಾಗಿದ್ದು ಇದೇ ಕಾರಣಕ್ಕೆ ಉದ್ಘಾಟನಾ ಸಮಾರಂಭವನ್ನು ರದ್ದು ಮಾಡಲಾಗಿದೆ ಎನ್ನಲಾಗುತ್ತಿದೆ.